Home namma chikmagalur chikamagalur ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ
chikamagalurCrime NewsHomeLatest Newsnamma chikmagalur

ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ

Share
Share

ಚಿಕ್ಕಮಗಳೂರು: ನಾಗಾಲ್ಯಾಂಡ್ ಮೂಲದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಅರವಿಂದ ನಗರ ಬಡಾವಣೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು 22 ವರ್ಷದ ಲುನ್ಸುಲಾ ಎಂದು ಗುರುತಿಸಲಾಗಿದ್ದು, ಈಕೆ ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಉದ್ಯೋಗಿಯಾಗಿದ್ದರು.

ಪ್ರಾಥಮಿಕ ವರದಿಗಳ ಪ್ರಕಾರ, ಲುನ್ಸುಲಾ ಅವರು ತಮ್ಮ ವಾಸದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಸಾವಿನ ಹಿಂದೆ ರಾಜೇಶ್ ಹಾಗೂ ತೇಜಸ್ ಎಂಬುವವರ ಕೈವಾಡವಿರಬಹುದು ಎಂಬ ಬಲವಾದ ಅನುಮಾನ ವ್ಯಕ್ತವಾಗಿದೆ.

ಮೃತ ಯುವತಿಯು ತನ್ನ ಪರ್ಸನಲ್ ಡೈರಿಯಲ್ಲಿ ಈ ಇಬ್ಬರ ಹೆಸರನ್ನು ಉಲ್ಲೇಖಿಸಿದ್ದು, ಇವರು ತನಗೆ ತೀವ್ರವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಬರೆದಿಟ್ಟಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಘಟನೆ ಸಂಭವಿಸುವುದಕ್ಕೂ ಮೊದಲು ಲುನ್ಸುಲಾ ಅವರು ಕಿವಿಶೆ ಕಿನಿಮಿ ಎಂಬುವವರ ಜೊತೆ ಸುಮಾರು ಅರ್ಧ ಗಂಟೆಗಳ ಕಾಲ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಲಶಿಲಾ ಇಂಚುಗ‌ರ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಚಿಕ್ಕಮಗಳೂರಿನ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಡೈರಿಯಲ್ಲಿನ ಅಂಶಗಳು ಹಾಗೂ ಮೃತರ ಮೊಬೈಲ್ ಕರೆಗಳ ವಿವರಗಳನ್ನು ಆಧರಿಸಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಯುವತಿಯ ಆತ್ಮಹತ್ಯೆಗೆ ನಿಖರವಾದ ಕಾರಣವೇನು ಮತ್ತು ಆ ಇಬ್ಬರು ವ್ಯಕ್ತಿಗಳು ನೀಡುತ್ತಿದ್ದ ಎನ್ನಲಾದ ಹಿಂಸೆಯ ಸ್ವರೂಪ ಎಂತದ್ದು ಎಂಬುದು ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.

Young woman from Nagaland commits suicide

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....