Home namma chikmagalur chikamagalur ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿದ ಯುವಕ ಬಂಧನ
chikamagalurCrime NewsHomeLatest Newsnamma chikmagalur

ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿದ ಯುವಕ ಬಂಧನ

Share
Share

ಚಿಕ್ಕಮಗಳೂರು: ಸರ್ಕಾರಿ ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್‌ಗೆ ಮಧ್ಯರಾತ್ರಿ ನುಗ್ಗಿ ಯುವಕಮೋರ್ವ ಓಡಾಟ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದಲ್ಲಿ ನಡೆದಿದೆ. ಹುಡುಗಿಯ ಹಾಸ್ಟೆಲ್‌ನಲ್ಲಿ ಮಧ್ಯರಾತ್ರಿ ಯುವಕನ ಕಂಡು ವಿದ್ಯಾರ್ಥಿನಿಯರು ಗಾಬರಿಗೊಂಡಿದ್ದು, ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಪ್ರಕರಣ ಸಂಬಂಧ ಆರೋಪಿ ಉತ್ತರ ಪ್ರದೇಶ ಮೂಲದ ರಾಕೇಶ್ (30) ಎಂಬಾತನನ್ನು ಬಂಧಿಸಲಾಗಿದೆ. ವಿದ್ಯಾರ್ಥಿನಿಯರು ವಸತಿ ಪಡೆದಿರುವ ಮೆಡಿಕಲ್ ಕಾಲೇಜಿನ ಈ ಹಾಸ್ಟೆಲ್‌ನಲ್ಲಿ ಇಂತಹ ಘಟನೆಗಳು ಹೊಸದೇನೂ ಅಲ್ಲ. ಈ ಹಿಂದೆಯೂ ಇದೇ ಮಾದರಿಯ ಘಟನೆಗಳು ನಡೆದಿದ್ದವು.

ಹೀಗಿದ್ದರೂ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಯುವತಿಯರು ಆಕ್ರೋಶ ಹೊರಹಾಕಿದ್ದಾರೆ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮೆಡಿಕಲ್ ಕಾಲೇಜು ಡೀನ್ ಪೊಲೀಸರಿಗೆ ದೂರು ನೀಡಿದ್ದು, ಮೆಡಿಕಲ್‌ ಕಾಲೇಜು ಹಾಸ್ಟೆಲ್ ಭದ್ರತೆ ಬಗ್ಗೆ ಭಾರಿ ಚರ್ಚೆಗಳು ಶುರುವಾಗಿವೆ.

ಇನ್ನು ಆರೋಪಿ ರಾಕೇಶ್ ಮೆಡಿಕಲ್ ಕಾಲೇಜು ಕಟ್ಟಡದ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕನೇ ಎಂಬುದು ಗೊತ್ತಾಗಿದೆ. ಹಾಸ್ಟೆಲ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯರ ಜೊತೆ ಆರೋಪಿ ಅನುಚಿತವಾಗಿ ವರ್ತನೆ ಮಾಡಿದ್ದಾನೆ ಎನ್ನಲಾಗಿದ್ದು, ಈತನನ್ನು ವಿದ್ಯಾರ್ಥಿನಿಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಭಾನುವಾರ ರಾತ್ರಿ ಘಟನೆ ನಡೆದಿದ್ದು, ವಿದ್ಯಾರ್ಥಿನಿಯರ ಕೈಯಿಂದ ತಪ್ಪಿಸಿಕೊಂಡು ಓಡಿಹೋಗಲು ಆರೋಪಿ ಯತ್ನಿಸಿದ್ದ. ಹೀಗಾಗಿ ಯಾವ ಕಾರಣಕ್ಕೆ ಈತ ಯುವತಿಯರ ಹಾಸ್ಟೆಲ್‌ಗೆ ತೆರಳಿದ್ದ ಎಂಬುದನ್ನು ಪೊಲೀಸರು ವಿಚಾರಣೆ ನಡೆಸಿದಾಗ, ಕಳ್ಳತನ ಮಾಡಲು ಹೋಗೊದ್ದೆ ಎಂದು ರಾಕೇಶ್ ತಪ್ರೊಪ್ಪಿಕೊಂಡಿದ್ದಾನೆ .

ಈ ಹಿಂದೆಯೂ ಆರೋಪಿ ರಾಕೇಶ್ ಹಾಸ್ಟೆಲ್‌ಗೆ ನುಗ್ಗಿದ್ದ. ಹೀಗಿದ್ದೂ ಮತ್ತೊಮ್ಮೆ ಅಂತಹುದ್ದೇ ಕೆಲಸ ಮಾಡಿದ್ದಾನೆ ಎಂಬುದು ತನಿಖೆ ವೇಳೆ ಬಯಲಾಗಿದೆ.

Youth arrested for breaking into girls’ hostel of medical college

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...