Home ಜೈನ ಸಮುದಾಯದ ಹೆಣ್ಣು ಮಕ್ಕಳನ್ನು ಅವಹೇಳನ-ಅಜ್ಜಂಪುರದಲ್ಲಿ ಯುವಕ ಬಂಧನ
HomeajjampuraCrime NewsLatest Newsnamma chikmagalur

ಜೈನ ಸಮುದಾಯದ ಹೆಣ್ಣು ಮಕ್ಕಳನ್ನು ಅವಹೇಳನ-ಅಜ್ಜಂಪುರದಲ್ಲಿ ಯುವಕ ಬಂಧನ

Share
Share

ಚಿಕ್ಕಮಗಳೂರು: ಯಾರದ್ದೂ ಪೋಸ್ಟ್‌ಗೆ ಕಮೆಂಟ್ ಹಾಕಿ ಜೈಲು ಸೇರಿದ ಕರ್ನಾಟಕ ಮೊದಲ ಪ್ರಕರಣ ಚಿಕ್ಕಮಗಳೂರಿನಲ್ಲಿ ನಡೆದಿದೆ. ಧರ್ಮಸ್ಥಳ ಪ್ರಕರಣದ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಹಲವು ಪೋಸ್ಟ್, ಬರಹ, ವಿಡಿಯೋಗಳು ಹರಿದಾಡುತ್ತಿದೆ. ಹೀಗೆ ಯಾರದ್ದೋ ಪೋಸ್ಟ್‌ಗೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಯುವಕ ಉಮೇಶ್ ಗೌಡ ಅಶ್ಲೀಲವಾಗಿ ಕಮೆಂಟ್ ಮಾಡಿದ್ದಾರೆ. ಪ್ರಮುಖವಾಗಿ ಜೈನ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ ಉಮೇಶ್ ಗೌಡ ಅರೆಸ್ಟ್ ಆಗಿದ್ದಾನೆ.

ಕಮೆಂಟ್ ಕುರಿತು ಭಾರಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಪೊಲೀಸರು ಬಿ.ಎನ್.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ನಬಿ.ಎನ್.ಎಸ್. ಕಾಯ್ದೆಯ 196 (1) ಹಾಗೂ 353 (2) ಅಡಿ ಪ್ರಕರಣ ದಾಖಲಿಸಿದ್ದಾರೆ. ಬಳಿಕ ಉಮೇಶ್ ಗೌಡನಿಗಾಗಿ ಹುಡುಕಾಡಿದ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.

ಸಾಮಾನ್ಯವಾಗಿ ಅವಹೇಳನ ಪೋಸ್ಟ್, ಅಥವಾ ಅಕ್ಷೇಪಾರ್ಹ ಪೋಸ್ಟ್, ವಿಡಿಯೋ ಹಾಕಿ ಅರೆಸ್ಟ್ ಆದ ಘಟನೆಗಳಿವೆ. ಆದರೆ ಇಲ್ಲಿ ಅವಹೇಳನ ಕಮೆಂಟ್ ಮಾಡಿ ಅರೆಸ್ಟ್ ಆಗಿದ್ದಾನೆ. ಯಾರದ್ದೋ ಪೋಸ್ಟ್‌ಗೆ ಕಮೆಂಟ್ ಮಾಡಿ ಅರೆಸ್ಚ್ ಆದ ರಾಜ್ಯದ ಮೊದಲ ಪ್ರಕರಣವಾಗಿದೆ. ನಟಿ ರಮ್ಯಾ ವಿರುದ್ದ ಅಶ್ಲೀ ಕಮೆಂಟ್ ಪ್ರಕರಣ ಇತ್ತೀಚೆಗಷ್ಟೇ ಬಾರಿ ಸದ್ದು ಮಾಡಿತ್ತು. ಹೀಗಾಗಿ ಪೊಲೀಸರು ಕಮೆಂಟ್ ಕುರಿತು ಭಾರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಮೆಂಟ್ ಮಾಡಿದ ಉಮೇಶ್ ಗೌಡನನ್ನು ಅಜ್ಜಂಪುರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಉಮೇಶ್ ನ್ಯಾಯಂಗ ಬಂಧನದಲ್ಲಿದ್ದಾರೆ. ಧರ್ಮಸ್ಥಳ ಪ್ರಕರಣ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಬರುವ ವಿಡಿಯೋ, ಫೋಟೋ, ಬರಹಗಳಗಳಿಗೆ ಕಮೆಂಟ್, ವಾಗ್ವಾದ, ಪರ ವಿರೋಧಗಳು ಹೆಚ್ಚಾಗುತ್ತಿದೆ. ಇದರ ನಡುವೆ ಹಲವರು ಉದ್ದೇಶಪೂರ್ವಕವಾಗಿ ಕೆಲ ಸಮದಾಯವನ್ನು ಟಾರ್ಗೆಟ್ ಮಾಡಿ ಕಮೆಂಟ್, ವಿಡಿಯೋಗಳನ್ನು ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ಪೊಲೀಸರು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಹಲವರ ಲಿಸ್ಟ್ ರೆಡಿಯಾಗಿದೆ. ಪ್ರಮುಖವಾಗಿ ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ, ಅಶ್ಲೀಲ ಕಮೆಂಟ್ ಮಾಡುತ್ತಿರುವವರ ಲಿಸ್ಟ್ ರೆಡಿಯಾಗಿದೆ. ಇದೀಗ ಒಬ್ಬರ ಹಿಂದೊಬ್ಬರಿಗೆ ಸಂಕಷ್ಟ ಎದುರಾಗಲಿದೆ ಎಂದು ಮೂಲಗಳು ಹೇಳುತ್ತಿದೆ.

Youth arrested in Ajjampura for insulting Jain girls

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ...

12ನೇ ಶತಮಾನದಲ್ಲೇ ಕನ್ನಡಕ್ಕೆ ವಚನಾಕಾರಿಂದ ಬಹಳ ದೊಡ್ಡ ಕೊಡುಗೆ

ಚಿಕ್ಕಮಗಳೂರು: ವಚನಾಕಾರರು ಕನ್ನಡಕ್ಕೆ ಬಹಳ ದೊಡ್ಡ ಕೊಡುಗೆಯನ್ನು ೧೨ನೇ ಶತಮಾನದಲ್ಲೇ ನೀಡಿದ್ದಾರೆ. ಜಗಜ್ಯೋತಿ ಬಸವಣ್ಣನವರು ಕೊಟ್ಟ ಸಾಂಸ್ಕೃತಿಕ ಚಳುವಳಿ ಬದುಕಿನ ಅನುಭವಗಳು ಅನುಭಾವವಾಗಿ ಜನರ ಆಡುಭಾಷೆಯಲ್ಲಿ ಸಾಹಿತ್ಯ ರಚಿಸಿ ಇಡೀ ಜಗತ್ತಿಗೆ ನೈತಿಕ...

Related Articles

ದೊಡ್ಡ ಮನೆ ಡಿಚ್ಚಿ ಯಾರಿಗೆ – ಕೈ ಕಸರತ್ತು ? ಬಿಜೆಪಿಯಲ್ಲಿ ತಳಮಳ !

ಅಜ್ಜಂಪುರ: ಪಟ್ಟಣ ಪಂಚಾಯತಿ ಚುನಾವಣೆ ನಡೆದು ಇಪ್ಪತ್ತು ದಿನಗಳಾಗಿದೆ ಆದರೆ ಅಧ್ಯಕ್ಷ/ ಉಪಾಧ್ಯಕ್ಷರ ಚುನಾವಣೆ ವಿಳಂಬ...

ಜನರಿಗೆ ವಾಸ್ತವ ಸಂಗತಿ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾದ್ಯಂತ ಪ್ರವಾಸ

ಚಿಕ್ಕಮಗಳೂರು : ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀಡುತ್ತಿರುವ ಜನಪರ ಯೋಜನೆಗಳ ಪ್ರಚಾರ ಕೈಗೊಳ್ಳುವುದರೊಂದಿಗೆ ವಿರೋಧ...

ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು

ಚಿಕ್ಕಮಗಳೂರು: ‘ಅಲ್ಲಂಪುರ ನಿವಾಸಿ ಓಂಕಾರಮೂರ್ತಿ ಮೇಲಿನ ಹಲ್ಲೆ ಸಂಬಂಧ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ‘ಬಿ’...

ಅಂಬೇಡ್ಕರ್ ಸಂವಿಧಾನದ ತತ್ವ ಹೊಂದಿರುವ ಪಕ್ಷ ಕಾಂಗ್ರೆಸ್

ಚಿಕ್ಕಮಗಳೂರು:  ಅಂಬೇಡ್ಕರ್ ಸಂವಿಧಾನದ ತತ್ವವನ್ನು ಹೊಂದಿರುವ ಪಕ್ಷ ಕಾಂ ಗ್ರೆಸ್. ಚುನಾವಣೆಗೆ ಮಾತ್ರ ಪಕ್ಷ ಸೀಮಿತವಾಗದೇ...