Home namma chikmagalur chikamagalur ಶಿಕಾರಿ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು
chikamagalurCrime NewsHomeLatest Newsnamma chikmagalur

ಶಿಕಾರಿ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

Share
Share

ಚಿಕ್ಕಮಗಳೂರು: ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಕೊಪ್ಪ ತಾಲೂಕಿನ ಕಡೇಮನೆ ಗ್ರಾಮದ ಚೇತನ್ (26) ಎಂದು ಗುರುತಿಸಲಾಗಿದೆ.

ಫಟನೆ ವಿವರ: ಚೇತನ್ ಸೇರಿದಂತೆ ಏಳು ಮಂದಿ ಸ್ನೇಹಿತರು ಕಳೆದ ರಾತ್ರಿ ಶಿಕಾರಿಗೆ ತೆರಳಿದ್ದರು. ಕತ್ತಲಿನಲ್ಲಿ ಶಿಕಾರಿ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಚೇತನ್‌ಗೆ ತಗುಲಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದರು ಎನ್ನಲಾಗಿದೆ.
ಗಾಯಗೊಂಡ ಚೇತನ್ ಅವರನ್ನು ಜೊತೆಗಿದ್ದ ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದರೆ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ.

ಘಟನೆ ಬಳಿಕ ಆಸ್ಪತ್ರೆಗೆ ಚೇತನ್ ಅವರನ್ನು ಕರೆತಂದಿದ್ದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶಿಕಾರಿಗೆ ತೆರಳಿದ್ದ ಏಳು ಮಂದಿಯಲ್ಲಿ ಮೂವರು ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗುಂಡು ಹಾರಿದ ರೀತಿಯೇನು, ಶಿಕಾರಿಗೆ ಬಳಸಿದ್ದ ಆಯುಧ ಯಾರದ್ದು ಹಾಗೂ ಘಟನೆಯ ಸಂದರ್ಭದಲ್ಲಿ ಯಾರು ಗುಂಡು ಹಾರಿಸಿದರು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Youth dies after being accidentally shot while hunting.

Share

Leave a comment

Leave a Reply

Your email address will not be published. Required fields are marked *

Don't Miss

ಕೊಪ್ಪ ತಾಲ್ಲೂಕಿನಲ್ಲಿ ಕಾಡುಕೋಣಗಳ ಉಪಟಳ

ಕೊಪ್ಪ: ಕಾಡುಕೋಣಗಳ ಉಪಟಳ ದಿನೇ ದಿನೇ ಮಿತಿ ಮೀರುತ್ತಿದ್ದು, ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಲಸೆ ಕಾರ್ಮಿಕರ ಮೇಲೆ ಏಕಾಏಕಿ ಕಾಡುಕೋಣ ದಾಳಿಗೆ ಯತ್ನಿಸಿದ ಆತಂಕಕಾರಿ ಘಟನೆ ಕೊಪ್ಪ ಅರಣ್ಯ ವಲಯ ವ್ಯಾಪ್ತಿಯ...

ಕೆಂಪುಬಸ್ ಬಲೂ ಗ್ಯಾರಂಟಿ ಡೇಂಜರ್ ? ಡೇಂಜರ್ ? ಕೆಟ್ಟು ನಿಲ್ಲುವ ಬಸ್ಸುಗಳು

ಚಿಕ್ಕಮಗಳೂರು:  ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಬಲೂ ಡೇಂಜರ್ ಯಾವಾಗ ಎಲ್ಲಿ ಕೆಟ್ಟು ನಿಲ್ಲುತ್ತವೆ ಎಂದು ಪ್ರಯಾಣಿಕರು ದೂರುವುದು ಸಾಮಾನ್ಯವಾಗಿದ್ದು ಜೊತೆಗೆ ತಳ್ಳು ಮಾಡಲ್ ಐಸಾ ಎಂದು ಬಸ್ಸುಗಳನ್ನು ತಳ್ಳುವ ದೃಶ್ಯ ಸಾಮಾನ್ಯವಾಗಿ...

Related Articles

ಕಾಡಾನೆ ದಾಳಿ ಖಂಡಿಸಿ ನರಸಿಂಹರಾಜಪುರ ಬಂದ್‌ ಯಶಸ್ವಿ

ನರಸಿಂಹರಾಜಪುರ: ಬಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆನ್ನಂಗಿ ಗ್ರಾಮದ ರೈತ ಕೃಷ್ಣಮೂರ್ತಿ ಅವರು ಬುಧವಾರ ಕಾಡಾನೆ...

20 ವರ್ಷ ಅಧಿಕಾರದಲ್ಲಿದ್ದರೂ ಜಿಲ್ಲೆಯ ಅಭಿವೃದ್ಧಿಗೆ ರವಿ ಕೊಡುಗೆ ಏನು?

ಚಿಕ್ಕಮಗಳೂರು: ಸುಮಾರು 20 ವರ್ಷಗಳ ಕಾಲ ಶಾಸಕರಾಗಿ ಅಧಿಕಾರ ಅನುಭವಿಸಿರುವ ಸಿ.ಟಿ. ರವಿ ಅವರು ಜಿಲ್ಲೆಗೆ...

ಮನೆಗೆ ನುಗ್ಗಿ ₹3.44 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಹಾಗೂ ನಗದು ಕಳವು

ಚಿಕ್ಕಮಗಳೂರು, ನ.20: ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಗಮನಿಸಿ ಕಳ್ಳರು ಮನೆಗೆ ನುಗ್ಗಿ ₹3.44 ಲಕ್ಷ...

ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವಿಗೆ ಶ್ರಮಿಸಬೇಕು

ಚಿಕ್ಕಮಗಳೂರು: ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಪಕ್ಷದ ಸಂಘಟನೆಗೆ...