Home Crime News ಗೂಡ್ಸ್‌ ವಾಹನ ಡಿಕ್ಕಿಗೆ ಯುವಕ ಸಾವು
Crime NewsHomeKadurLatest Newsnamma chikmagalur

ಗೂಡ್ಸ್‌ ವಾಹನ ಡಿಕ್ಕಿಗೆ ಯುವಕ ಸಾವು

Share
Share

ಕಡೂರು: ಸಖರಾಯಪಟ್ಟಣ ಸಮೀಪದ ಹಿರೇಗೌಜ ಗೇಟ್ ಬಳಿ ನಡೆದ ರಸ್ತೆ ಅಪ ಘಾತದಲ್ಲಿ ಗೂಡ್ಸ್ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾರೆ.

ಹಾಸನ ಮೂಲದ ಯಶವಂತ್ (26) ಮೃತಪಟ್ಟವರು. ಇವರು ಬೆಂಗಳೂರಿನಲ್ಲಿ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರು.

ಶುಕ್ರವಾರ ರಾತ್ರಿ ಅಜ್ಜಂಪುರಕ್ಕೆ ತೆರಳಿದ್ದ ಯಶವಂತ್, ಬಳಿಕ ಚಿಕ್ಕಮಗಳೂರಿನತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿರೇಗೌಜ ಗೇಟ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಅಪಘಾತ ಸಂಭವಿಸಿದೆ. ಕಡೂರಿನಿಂದ ಚಿಕ್ಕಮಗಳೂರಿನತ್ತ ತೆರಳುತ್ತಿದ್ದ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಯಶವಂತ್ ಅವರ ಕಾಲು ಮತ್ತು ಸೊಂಟಕ್ಕೆ ತೀವ್ರ ಗಾಯಗಳಾಗಿದ್ದವು.

ಸ್ಥಳೀಯರ ನೆರವಿನಿಂದ ಆಂಬುಲೆನ್ಸ್ ಮೂಲಕ ಅವರನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಮೃತಪಟ್ಟರು.

ಮೃತ ಯುವಕ ಶುಕ್ರವಾರ ರಾತ್ರಿ ತನ್ನ ತಾಯಿಗೆ ಕರೆ ಮಾಡಿ, ತಾನು ನೀಡಿದ್ದ ಕಾರಿನ ಸಾಲದ ವಿಚಾರವಾಗಿ ಅಜ್ಜಂಪುರಕ್ಕೆ ತೆರಳುತ್ತಿರುವುದಾಗಿ ತಿಳಿಸಿದ್ದ ಎಂದು ಕುಟುಂಬದವರು ಹೇಳಿದ್ದಾರೆ. ಯುವಕನ ತಾಯಿ ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Youth dies in goods vehicle collision

Share

Leave a comment

Leave a Reply

Your email address will not be published. Required fields are marked *

Don't Miss

ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮಾರಾಮಾರಿ

ಚಿಕ್ಕಮಗಳೂರು: ಶಾಂತಿಯುತವಾಗಿ ನಡೆಯಬೇಕಿದ್ದ ರೈತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯೊಂದು ನೋಡನೋಡುತ್ತಿದ್ದಂತೆ ಜಿದ್ದಾಜಿದ್ದಿನ ಅಖಾಡವಾಗಿ ಮಾರ್ಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಹಂಗರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿದೆ. ಸಭೆಯಲ್ಲಿ...

ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಪ್ರತಿಷ್ಠಾಪನೆ ಉತ್ಸವಗಳು ನಡೆದವು. ಬೋಳರಾಮೇಶ್ವರ ದೇವಸ್ಥಾನದದ ಆವರಣದಲ್ಲಿ ಸಾರ್ವಜನಿಕ ಗಣಪತಿ ಸೇವಾ ಸಮಿತಿಯಿಂದ(ಅಜಾದ್ ಮೈದಾನ), ಹಿಂದೂ ಮಹಾಗಣಪತಿ ಸೇವಾ ಸಂಘದ...

Related Articles

ಜಿಲ್ಲೆಯ ಐದು ಜನ ಶಾಸಕರಿಗೆ ಬೊಗಣಿ ಗೂಟ ಖಚಿತ !?

ಚಿಕ್ಕಮಗಳೂರು: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸುವ ಜೊತೆಗೆ ಕಾಂಗ್ರೆಸ್ ಮುಖಂಡರು ಮತ್ತು...

ಕಲಿಕೆ ವಯಸ್ಸಿನಲ್ಲಿ ವ್ಯಾಮೋಹಕ್ಕೆ ಒಳಗಾಗದಿರಿ

ಚಿಕ್ಕಮಗಳೂರು: ರಾಷ್ಟ್ರದ ಭವಿಷ್ಯವನ್ನು ಉಜ್ವಲಗೊಳಿಸುವ ಇಂದಿನ ಯುವಪೀಳಿಗೆ ಬಹಳ ಷ್ಟು ಎಚ್ಚರಿಕೆ ವಹಿಸಬೇಕು. ಕಲಿಕೆಯಲ್ಲಿ ಹೊರತಾಗಿ...

ಭೋವಿ ಜಾತಿ ಪ್ರಮಾಣಪತ್ರ ನೀಡಲು ವಿಳಂಬ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವಡ್ಡರ ಸಮುದಾಯದವರಿಗೆ ಭೋವಿ ಜಾತಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಅಧಿಕಾರಿಗಳು ಅನಗತ್ಯ ತೊಂದರೆ...

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ...